Friday, February 1, 2019

ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಸಂಘಟನೆಯ ಅಧ್ಯಕ್ಷರಾಗಿ ವಿಷ್ಣು ನಾಯರ್
ಹಾರ್ದಿಕ ಅಭಿವಂದನೆಗಳು-ವಂದನೆಗಳು

ದಾಂಡೇಲಿ : ಮಾಜಿ ಪ್ರಧಾನಿ, ಅಜಾತಶತ್ರು ರಾಜಕಾರಣಿಯಾಗಿದ್ದ ದಿ: ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಸಂಘಟನೆಯ ದಾಂಡೇಲಿ ನಗರದ ಅಧ್ಯಕ್ಷರಾಗಿ ಯುವ ಸಾಮಾಜಿಕ ಮುಖಂಡ, ಬಿಜೆಪಿ ಯುವ ಮೋರ್ಚಾದ ಪ್ರಮುಖ ಪದಾಧಿಕಾರಿ ವಿಷ್ಣು ನಾಯರ್ ಅವರು ಆಯ್ಕೆಯಾಗಿದ್ದಾರೆ.
 
ಕಳೆದ ಕೆಲ ವರ್ಷಗಳಿಂದ ದಿ: ಅಟಲ್ ಬಿಹಾರಿ ವಾಜಪೇಯಿಯವರ ಹೆಸರಿನಲ್ಲಿ ವಿವಿಧ ಜನಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಅಟಲಜೀಯವರು ದೇಶಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುವ ಕಾರ್ಯವನ್ನು ವಿಷ್ಣು ನಾಯರ್ ಅವರು ಮಾಡಿಕೊಂಡು ಬರುತ್ತಿದ್ದರು. ನಗರದ ವಿವಿಧ ಜನಪರ ಹೋರಾಟ ಹಾಗೂ ಸಮಾಜಮುಖಿ ಕಾರ್ಯಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ವಿಷ್ಣು ನಾಯರ್ ಅವರು ಇದೀಗ ದಿ: ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಸಂಘಟನೆಯ ಅಧ್ಯಕ್ಷರಾಗಿರುವುದಕ್ಕೆ ನಗರದ ಗಣ್ಯರನೇಕರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಸಾಮಾಜಿಕ ಸೇವಾಕೈಂಕರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳುವುದರ ಮೂಲಕ ದೇವರು ಮೆಚ್ಚುವ ಕಾರ್ಯವನ್ನು ಮಾಡುತ್ತಿರುವುದಕ್ಕೆ ನನ್ನ ಕಡೆಯಿಂದ ವಿಶೇಷ ಅಭಿವಂದನೆಗಳು.
 
ನಿಮ್ಮವ
 
ಸಂದೇಶ್.ಎಸ್.ಜೈನ್


 

No comments:

Post a Comment

ಬರ್ತುಡೆ ಸಂಭ್ರಮದಲ್ಲಿ ನೇರ ಮಾತಿನ ರವೀಂದ್ರ ಶಾಹ ಮಾನವೀಯ ಸೇವಾಕೈಂಕರ್ಯದ ಜನಸೇವಕ ನೇರ, ನಿಷ್ಟುರ ಮಾತಿನ ಅಪ್ಪಟ ಜನಸೇವಕ. ಸಂಕಷ್ಟಕ್ಕೆ ತಡವರಿಯದೆ ಸ್ಪಂದಿಸುವ ಮಾ...