Friday, June 5, 2020

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳ ದರ್ಶನ ವ್ಯವಸ್ಥೆ
ದಿನಾಂಕ 8-6-2020 ರಿಂದ ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶ
 
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ದಿನಾಂಕ 8-6-2020 ರಿಂದ ಮಾಡಿಕೊಡಲಾಗುವುದೆಂದು ಶ್ರೀ ಕ್ಷೇತ್ರ ಧರ್ಮಸ್ಥಳಶ್ರೀ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿಯವರು ತಿಳಿಸಿರುತ್ತಾರೆ.
 
ದೇವರ ದರ್ಶನಕ್ಕೆ ಧರ್ಮಸ್ಥಳದ ದೇವಳದಲ್ಲಿ, ಅನ್ನಪೂರ್ಣ ಭೋಜನ ಮಂದಿರದಲ್ಲಿ, ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದೆ. 

ದೇವಸ್ಥಾನದ ಒಳ ಪ್ರವೇಶ ಮಾಡುವವರು ತೆಗೆದುಕೊಳ್ಳಬೇಕಾದ ಕ್ರಮಗಳು ಇಂತಿವೆ. 

1. ಮುಖಕ್ಕೆ ಮಾಸ್ಕ್ ಧರಿಸಿರಬೇಕು
2. ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡಬೇಕು
3. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು
4. ಕೈಗೆ ಸ್ಯಾನಿಟೈಸರ್ ಹಾಕಿಸಿಕೊಳ್ಳಬೇಕು. 

ಅರ್ಚಕ ಸಿಬ್ಬಂದಿಗಳು, ರಕ್ಷಣಾ ಸಿಬ್ಬಂದಿಗಳು, ಸ್ವಯಂ ಸೇವಕರು ಕೈಗೊಳ್ಳಬೇಕಾದ ಕ್ರಮಗಳನ್ನು ವಿಮರ್ಶಿಸಿ ಸೂಕ್ತ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. 

ಅದೇ ರೀತಿ ಅನ್ನಪೂರ್ಣ ಭೋಜನಾಲಯದಲ್ಲಿ ಭೋಜನಕ್ಕೆ ಬರುವವರಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ. ಕ್ಷೇತ್ರಕ್ಕೆ ಬರುವ ಭಕ್ತಾದಿಗಳು ತಮ್ಮ ಆರೋಗ್ಯವನ್ನು ಪರಿಶೀಲಿಸಿಕೊಳ್ಳುವರೇ ಕೋರಿದೆ. 
 
ಜ್ವರ, ಕೆಮ್ಮು ಮುಂತಾದ ಅನಾರೋಗ್ಯ ಸ್ಥಿತಿಯಲ್ಲಿ ದರ್ಶನಕ್ಕೆ ಅವಕಾಶ ಮಾಡಿಕೊಡಲು ಸಾಧ್ಯವಾಗುವುದಿಲ್ಲ. 
ಭಕ್ತಾದಿಗಳು ದೇವಸ್ಥಾನದ ಆಡಳಿತದ ಜೊತೆಯಲ್ಲಿ ಸಹಕಾರ ನೀಡಬೇಕೆಂದು ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

No comments:

Post a Comment

ಬರ್ತುಡೆ ಸಂಭ್ರಮದಲ್ಲಿ ನೇರ ಮಾತಿನ ರವೀಂದ್ರ ಶಾಹ ಮಾನವೀಯ ಸೇವಾಕೈಂಕರ್ಯದ ಜನಸೇವಕ ನೇರ, ನಿಷ್ಟುರ ಮಾತಿನ ಅಪ್ಪಟ ಜನಸೇವಕ. ಸಂಕಷ್ಟಕ್ಕೆ ತಡವರಿಯದೆ ಸ್ಪಂದಿಸುವ ಮಾ...